ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಇಂದು ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ಅವರು ಬೆಂಗಳೂರು ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಕೋವಿಡ್ ಟೆಸ್ಟಿಂಗ್, ಚಿಕಿತ್ಸೆ, ಸಿಬ್ಬಂದಿಗಳ ಲಭ್ಯತೆ ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲನೆ ನಡೆಸಲಾಯಿತು. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಬಿಎಂಸಿ ನಿರ್ದೇಶಕರು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.