ಸಧ್ಯದ ಸಂಕ್ಷಿಪ್ತ ಸುದ್ದಿ:
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 42 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯು ನಡೆಯುತ್ತಿದೆ.

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್, ರಾಜ್ಯ ಮತ್ತು ಯುಟಿಗಳ ಹಣಕಾಸು ಮಂತ್ರಿಗಳು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಸಹ ಸಭೆಯಲ್ಲಿ ಉಪಸ್ಥಿತರಿದ್ದಾರೆ.


