ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೊಬೈಲ್ ಆ್ಯಪ್, ಪರಿಸರ ವಾಹಿನಿ ಪತ್ರಿಕೆ ಹಾಗೂ ಜಿ.ಪಿ.ಎಸ್ ಟ್ರಾಕಿಂಗ್ ಸಿಸ್ಟಂ ಅನ್ನು ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬಿಡುಗಡೆ ಮಾಡಿದರು.


ಈ ಸಂದರ್ಭದಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಮರಿಸ್ವಾಮಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ವಿಜಯ ಕುಮಾರ್ ಗೋಗಿ, ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿಯಾದ ಸಂದೀಪ್ ದವೆ ಮತ್ತು ಇಲಾಖಾ ಸಂಬಂಧಿತ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
