ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಲದ ವತಿಯಿಂದ ಆಯೋಜಿಸಿದ್ದ ‘ಎಕ್ಸಿಲರೇಟರ್ ಬೆಂಗಳೂರು’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವರಾದ ಸಿ ಸಿ ಪಾಟೀಲ್, ಎಫ್ ಕೆ ಸಿ ಸಿ ಐ ಅಧ್ಯಕ್ಷರಾದ ಪೆರಿಕಲ್ ಎಂ ಸುಂದರ್, ಕೌಶಲ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಮತ್ತು ಯು ಬಿ ಯು ಎನ್ ಟಿ ಯು ಸಂಸ್ಥೆಯ ಸ್ಥಾಪಕಿಯರಾದ ರತ್ನಪ್ರಭಾ ಮೊದಲಾದವರು ಉಪಸ್ಥಿತರಿದ್ದರು.