ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ನಂತರ ಪೌರ ಕಾರ್ಮಿಕರಿಗೆ ಸಮವಸ್ತ್ರಗಳನ್ನು – ಸುರಕ್ಷತಾ ವಸ್ತುಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಬಿ. ಶ್ರೀರಾಮುಲು , ಮಾಜಿ ಸಚಿವರಾದ ಹೆಚ್. ಆಂಜನೇಯ, ಬಿ ಬಿ ಎಂ ಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ, ಆಡಳಿತಾಧಿಕಾರಿಗಳಾದ ರಾಕೇಶ್ ಸಿಂಗ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರು ಹಾಜರಿದ್ದರು.

“ಸಂವಿಧಾನ ಶಿಲ್ಪಿ, ಭಾರತರತ್ನ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು. ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆಗಳನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಡಾ|| ಅಂಬೇಡ್ಕರ್ ಅವರ ಸಾಧನೆ, ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಚರಿತ್ರಾರ್ಹ”_ ಶ್ರೀ ಬಿ. ಎಸ್. ಯಡಿಯೂರಪ್ಪ, ಮಾನ್ಯ ಮುಖ್ಯ ಮಂತ್ರಿಗಳು.