- ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೆಳಗಾವಿ, ಧಾರವಾಡ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಚಿಕ್ಕಮಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ವಿಪತ್ತು ನಿರ್ವಹಣಾ ತಂಡ ನಿರಂತರವಾಗಿ ಜಿಲ್ಲಾ ಆಡಳಿತದ ಜೊತೆ ಸಂಪರ್ಕದಲ್ಲಿದೆ – ಕಂದಾಯ ಇಲಾಖೆ.
- ಜಗತ್ತಿನಾದ್ಯಂತ ಕ್ರೀಡಾಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.
- ಚಿಯರ್ ಅಥ್ಲೀಟ್ಸ್ ನಲ್ಲಿ ಸಚಿವ ಅನುರಾಗ್ ಠಾಕೂರ್ ಭಾಗಿ; ಪ್ರತಿಯೊಂದು ರಾಜ್ಯವು ನಿರ್ದಿಷ್ಠ ಕ್ರೀಡೆಗೆ ಪ್ರೋತ್ಸಾಹ ನೀಡಬೇಕು.
- ಕೊಲಂಬೋದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ ಏಕದಿನ ಕ್ರಿಕೆಟ್ ಸರಣಿ ಕೊನೆಯ ಪಂದ್ಯದಲ್ಲಿಂದು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
- ಚಿಕ್ಕಬಳ್ಳಾಪುರ ನಂದಿ ಗಿರಿಧಾಮಕ್ಕೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ ಭೇಟಿ ನೀಡಿ , ಉದ್ದೇಶಿತ ರೋಪ್ ವೇ ನಿರ್ಮಾಣ ಕಾಮಗಾರಿಯ ಸ್ಥಳ ಹಾಗೂ ವಾಹನ ಪಾರ್ಕಿಂಗ್ ಸ್ಥಳವನ್ನು ಪರಿಶೀಲಿಸಿದರು.
- ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆಯಿಂದ ಶಿರಾಡಿ ಘಾಟ್ ರಸ್ತೆ ಕುಸಿದಿರುವ ಹಿನ್ನೆಲೆ ಮಂಗಳೂರು – ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾಹಿತಿ ತಿಳಿಸಿದ್ದಾರೆ.
- ಮೈಸೂರು: ಕೇರಳದ ವೈನಾಡಿನಲ್ಲಿ ಉತ್ತಮ ಮಳೆ, ಕಬನಿ ಜಲಾಶಯ ಭರ್ತಿ.
- ಕೇರಳದ ವೈನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶದಿಂದ 30 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ. 2 ಸಾವಿರದ 281.10 ಅಡಿಗಳಿಗೆ ನೀರಿನ ಮಟ್ಟ ಏರಿಕೆಯಾಗಿದೆ.
- ತೃಣಮೂಲ ಕಾಂಗ್ರೆಸ್ ಸದಸ್ಯ ಶಂತನು ಸೇನ್ ಅಮಾನತ್ತು.
- ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಬೀಳುತ್ತಿದ್ದು, ಕಾವೇರಿ, ಲಕ್ಷಣತೀರ್ಥ ನದಿ ಸೇರಿದಂತೆ ತೊರೆಗಳು ತುಂಬಿ ಹರಿಯುತ್ತಿದೆ. ಕಾವೇರಿನದಿ ಪ್ರವಾಹದಿಂದಾಗಿ ಭಾಗಮಂಡಲ ಮತ್ತು ನಾಪೋಕ್ಲು ಸಂಪರ್ಕ ರಸ್ತೆಯ ಮೇಲೆ ನದಿನೀರು ಹರಿಯುತ್ತಿದ್ದು, ಜಿಲ್ಲೆಯ ಹಲವೆಡೆ ಮಳೆ, ಗಾಳಿಗೆ ಮರಗಳು ಬಿದ್ದಿದ್ದು, ಅನೇಕ ಕಡೆ ವಿದ್ಯುತ್ ಸಂಪರ್ಕ ವ್ಯತ್ಯಯಗೊಂಡಿದೆ.
- ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ; ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಒತ್ತು – ಮುಖ್ಯಮಂತ್ರಿ ಬಿ ಎಸ್ ವೈ.
- ಭಾರತೀಯ ರಿಸರ್ವ್ ಬ್ಯಾಂಕ್ – ಆರ್‌ಬಿಐ ಮುಂದಿನ ದಿನಗಳಲ್ಲಿ ಡಿಜಿಟಲ್ ಕರೆನ್ಸಿ ಪ್ರಾರಂಭಿಸಲು ಉದ್ದೇಶಿಸಿದೆ ಎಂದು ಡೆಪ್ಯುಟಿ ಗವರ್ನರ್ ಟಿ.ರವಿಶಂಕರ್ ಹೇಳಿದ್ದಾರೆ. ಪ್ರಸ್ತುತ ಹಂತ ಹಂತವಾಗಿ ಈ ಕರೆನ್ಸಿಯನ್ನು ಜಾರಿಗೆ ತರಲು ಆರ್‌ಬಿಐ ಸಮ್ಮತಿಸಿದೆ.
