ಬೆಂಗಳೂರು: “1ನೇ ತರಗತಿಯಿಂದ 8ನೇ ತರಗತಿವರೆಗೆ ಶಾಲೆ ಆರಂಭ ಮಾಡುವ ಕುರಿತಂತೆ ಮುಂದಿನ ದಿನಗಳಲ್ಲಿ ತಜ್ಞರೊಂದಿಗೆ ಚರ್ಚಿಸಿ ನಂತರ ಕ್ರಮ ಕೈಗೊಳ್ಳಲಾಗುವುದು”_ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಬೆಂಗಳೂರು: ಕಿದ್ವಾಯಿ ಗಂಥಿ ಸಂಸ್ಥೆಯಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಒಪಿಡಿ ಬ್ಲಾಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ, ಇತರೆ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ: ಸಿ.ರಾಮಚಂದ್ರ ಸೇರಿದಂತೆ ಸಂಸ್ಥೆಯ ಮೊದಲಾದವರು ಉಪಸ್ಥಿತರಿದ್ದರು.
ಯುನೈಟೆಡ್ ಸ್ಟೇಟ್ಸ್: ಫುಡ್ ಮತ್ತು ಡ್ರಗ್ ಅಡ್ಮಿನಿಸ್ಟ್ರೇಷನ್ ಫಿಜರ್ ಮತ್ತು ಬಯೋಟೆಕ್‌ನ ಕೋವಿಡ್ -19 ಲಸಿಕೆಯನ್ನು 16 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರಿಗೆ ಅನುಮೋದಿಸಿದೆ ಎಂದು ಘೋಷಿಸಿತು.
ಇಂದಿನ ಕೋವಿಡ್-19 ವರದಿ:
ಕರ್ನಾಟಕ: 1151 ಹೊಸ ಪ್ರಕರಣಗಳು, 1442 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಸಾವಿನ ಸಂಖ್ಯೆ 10, ಸಕ್ರಿಯ ಪ್ರಕರಣಗಳು 20255.
ಮಹಾರಾಷ್ಟ್ರ: 3643 ಹೊಸ ಪ್ರಕರಣಗಳು, 6795 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರು, ಸಾವಿನ ಸಂಖ್ಯೆ 105, ಸಕ್ರಿಯ ಪ್ರಕರಣಗಳು 49924.
