ರಾಜ್ಯ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಳೆಯಿಂದ 4 ದಿನ ರಾಜ್ಯ ಪ್ರವಾಸ -ಚಾಮರಾಜನಗರದಲ್ಲಿ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯ ಕಟ್ಟಡ ಉದ್ಘಾಟನೆ.
ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ‘ನಾವೀನ್ಯತೆ ಮತ್ತು ಪರಿಣಾಮ’ ಕುರಿತ ಕಾರ್ಯಕ್ರಮವನ್ನು ವರ್ಚುಯಲ್ ಮಾಧ್ಯಮದ ಮುಖಾಂತರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಡಾ. ಅಶ್ವತ್ ನಾರಾಯಣ ಜವಳಿ ಮತ್ತು ಸಕ್ಕರೆ ಸಚಿವ ಶಂಕರ್ ಮುನೇನಕೊಪ್ಪ, ಶಾಸಕರಾದ ಜಗದೀಶ್ ಶೆಟ್ಟರ್ , ಅರವಿಂದ್ ಬೆಲ್ಲದ್ ಮತ್ತಿತರರು ಭಾಗವಹಿಸಿದ್ದರು.
“ನಮ್ಮ ಇಲಾಖೆಯು ‘ಉದ್ಯಮಿಯಾಗು ಉದ್ಯೋಗ ನೀಡು’ ಅನ್ನು ಅಕ್ಟೋಬರ್ 11, 2021 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದವಿ ಹೊಂದಿರುವವರಿಗೆ ಉದ್ಯಮಶೀಲತಾ ಕಾರ್ಯಾಗಾರವನ್ನು ಆಯೋಜಿಸುತ್ತಿದೆ. ಎಲ್ಲಾ ಪದವೀಧರರು ಮತ್ತು ಉದಯೋನ್ಮುಖ ಉದ್ಯಮಿಗಳು ಈ ಕಾರ್ಯಾಗಾರಕ್ಕೆ ಹಾಜರಾಗಲು ಮತ್ತು ನಿಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡುವ ಅವಕಾಶವನ್ನು ಬಳಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ.”_ ಮುರುಗೇಶ್ ಆರ್ ನಿರಾಣಿ, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವರು.
ಮೈಸೂರು ದಸರಾ ಮಹೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ: ಇದೇ 7 ರಿಂದ 15ರ ವರೆಗೆ ಒಟ್ಟು 9 ದಿನಗಳ ನಾಡಹಬ್ಬ – ಕೋವಿಡ್ ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಆದೇಶ.
ಟ್ವೀಟ್ ಕಾರ್ನರ್: 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸೇವಾಸಿಂಧು ಆನ್ ಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್ ಗಳಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ವಾಯುಯ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ, ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರಾಜ್ಯ: “ಚೀನಾ ಮೂಲಸೌಕರ್ಯವನ್ನು ಹೆಚ್ಚಿಸಿದೆ ಆದರೆ ಅದು ನಮ್ಮ ಕಾರ್ಯಾಚರಣೆಯ ಸಿದ್ಧತೆಯ ಮೇಲೆ ಪರಿಣಾಮ ಬೀರುವುದಿಲ್ಲ”_ ಪೂರ್ವ ಲಡಾಖ್‌ನ ಐಎಎಫ್ ಮುಖ್ಯಸ್ಥರು.
ಶೇರು ಮಾರುಕಟ್ಟೆ: ಸೆನ್ಸೆಕ್ಸ್ ಆರಂಭಿಕ ಸೆಷನ್ ನಲ್ಲಿ 92.73 ಅಂಕ ಇಳಿದು 59,206.59 ಕ್ಕೆ ಇಳಿದಿದೆ; ನಿಫ್ಟಿ 20.40 ಅಂಕಗಳು 17,670.85 ಕ್ಕೆ ಇಳಿದಿದೆ.
ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ಎದುರು ರೂಪಾಯಿ 32 ಪೈಸೆ ಕುಸಿದು 74.63 ಕ್ಕೆ ತಲುಪಿದೆ
ಇತಿಹಾಸದ ಈ ದಿನ : ಅಕ್ಟೋಬರ್ 5, 1948 ಇಂಟರ್ ನ್ಯಾಷನಲ್ ಯೂನಿಯನ್ ಕನ್ ಸರ್ ವೇಷನ್ ಆಫ್ ನೇಚರ್ (IUCN ) ಅನ್ನು ಫ್ರಾನ್ಸ್ ನಲ್ಲಿ ಸ್ಥಾಪಿಸಲಾಯಿತು. ಇದನ್ನು ವಿಶ್ವದ ಅತಿದೊಡ್ಡ ಪರಿಸರ ಸಂರಕ್ಷಣಾ ಸಂಸ್ಥೆ ಎಂದು ಪರಿಗಣಿಸಲಾಗಿದೆ. ಅಕ್ಟೋಬರ್ 5, 2011 ರಂದು ಆಪಲ್ ಸಂಸ್ಥೆಯ ಸಹ-ಸಂಸ್ಥಾಪಕರಾದ ಸ್ಟೀವ್ ಜಾಬ್ಸ್ ಅವರು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನಿಂದಾಗಿ ತಮ್ಮ 56 ನೇ ವಯಸ್ಸಿನಲ್ಲಿ ನಿಧನರಾದರು.
ಕ್ರೀಡೆ: ಶಾರ್ಜಾದಲ್ಲಿಂದು ನಡೆಯಲಿರುವ ಐಪಿಎಲ್ 2021 ಕ್ರಿಕೆಟ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಆರಂಭವಾಗಲಿದೆ.
