- ಪ್ರಧಾನಿ ನರೇಂದ್ರ ಮೋದಿ , ಸಂಸತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಸಂಸತ್ತಿನಲ್ಲಿ ಪ್ರತಿಯೊಂದು ವಿಷಯಗಳಿಗೆ ಉತ್ತರ ನೀಡಲು ಹಾಗೂ ದೇಶದ ಹಿತದೃಷ್ಟಿಯಿಂದ ಎಲ್ಲ ವಿಷಯಗಳ ಚರ್ಚೆಗೂ ಸಿದ್ಧವಿದೆ.ಇದು ಅತ್ಯಂತ ಪ್ರಮುಖ ಅಧಿವೇಶನವಾಗಿದೆ ಎಂದು ಹೇಳಿದರು.
- ಲೋಕಸಭೆಯು ಒಂದು ವರ್ಷದ ಪ್ರತಿಭಟನೆಯ ಕೇಂದ್ರದಲ್ಲಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಿದೆ. ಪ್ರತಿಪಕ್ಷಗಳ ಸದಸ್ಯರು ವಿಧೇಯಕದ ಮೇಲೆ ಚರ್ಚೆಗೆ ಒತ್ತಾಯಿಸಿದ್ದರಿಂದ ಗದ್ದಲದ ನಡುವೆಯೇ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಮಸೂದೆಯನ್ನು ಮಂಡಿಸಿದರು. ಈಗ ಮಸೂದೆಯನ್ನು ರಾಜ್ಯಸಭೆ ಕೈಗೆತ್ತಿಕೊಳ್ಳಲಿದೆ.

- ಕೋವಿಡ್ -19 ರೂಪಾಂತರಿ ವೈರಸ್ ಹಿನ್ನೆಲೆಯಲ್ಲಿ ಕರ್ನಾಟಕ , ಕೇರಳ ಗಡಿ ಭಾಗದಲ್ಲಿ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳದಲ್ಲಿ ರೂಪಾಂತರಿ ವೈರಸ್ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರು ಮತ್ತು ವಾಹನಗಳ ಮೇಲೆ ನಿಗಾ ಇಡಲಾಗಿದೆ. 72 ಗಂಟೆಯೊಳಗೆ ಆರ್ ಟಿಪಿಸಿಆರ್ ತಪಾಸಣೆ ಮಾಡಿಸಿರುವ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.
- ರಾಷ್ಟ್ರಪತಿ ರಾಮನಾಥ್ ಕೋವಿಂದ್ 2 ದಿನಗಳ ಉತ್ತರಾಖಂಡ ಪ್ರವಾಸ – ಹರಿದ್ವಾರದ ಶಾಂತಿ ಕುಂಜ್ ನಲ್ಲಿ ಆಯೋಜಿಸಿರುವ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗಿ.
- ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮಕ್ಕೆ ಸಿ ಎಂ ಬಸವರಾಜ ಬೊಮ್ಮಯಿ ಅವರು ಚಾಲನೆ ನೀಡಿದರು.
- ಕೇಂದ್ರೀಯ ನೇರ ತೆರಿಗೆ ಮಂಡಳಿ ಹಾಗೂ ಕಸ್ಟಮ್ಸ್ – ಸಿಬಿಐಸಿ, ಅಧ್ಯಕ್ಷರಾಗಿ ವಿವೇಕ್ ಜೋಹ್ರಿ ನೇಮಕಗೊಂಡಿದ್ದಾರೆ.
- ಕನ್ಯಾಕುಮಾರಿ ಮತ್ತು ತಿರುನಲ್ವೇಲಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ: ಪ್ರಾದೇಶಿಕ ಹವಾಮಾನ ಕೇಂದ್ರ, ಚೆನ್ನೈ.
- ಓಮಿಕ್ರಾನ್ ಹರಡುತ್ತಿದ್ದಂತೆ ಜಪಾನ್ ವಿದೇಶಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದೆ.
- WhatsApp Pay ಮುಂದಿನ ಆರು ತಿಂಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಯೋಜಿಸಿದೆ.
