ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಒಟ್ಟು 303 ಸ್ನಾತಕ, 107 ಸ್ನಾತಕೋತ್ತರ ಹಾಗೂ 26 ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಿದರು. ಜೊತೆಗೆ ಸ್ನಾತಕ ಪದವಿಯಲ್ಲಿ 21 ಚಿನ್ನದ ಪದಕ, ಸ್ನಾತಕೋತ್ತರ ಪದವಿಯಲ್ಲಿ 14 ಚಿನ್ನದ ಪದಕ ಹಾಗೂ ಡಾಕ್ಟರೇಟ್ ಪದವಿಯಲ್ಲಿ 10 ಚಿನ್ನದ ಪದಕಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಿದರು.

ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳ ಪೈಕಿ, ಕೇರಳ ಮೂಲದ ರಾಯಚೂರು ಕೃಷಿ ವಿವಿಯ ಬಿಎಸ್ಸಿ ಅಗ್ರಿಕಲ್ಚರ್ ವಿದ್ಯಾರ್ಥಿನಿ ಗೀತಿಕಾ ಟಿ.ವಿ ಒಟ್ಟು 6 ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ.

