ಬೆಂಗಳೂರು: ಕರ್ನಾಟಕದ ನೂತನ ಲೋಕಾಯುಕ್ತರಾಗಿ, ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರಗ ಜ್ಞಾನೇಂದ್ರ, ವಿ. ಸೋಮಣ್ಣ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರಮಾಣವಚನ ಸ್ವೀಕರಿಸಿದ ನಂತರ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದರು. ನಂತರ ವಾಹಿನಿಯೊಂದಕ್ಕೆ ಬಿ.ಎಸ್. ಪಾಟೀಲ್, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ನೊಂದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಸೂಕ್ತ ಪರಿಹಾರ ನೀಡಲು ಯತ್ನಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬ ಸೇರಿದಂತೆ ಯಾವುದೇ ದೂರಗಳನ್ನು ಸಾರ್ವಜನಿಕರು ನೇರವಾಗಿ ಲೋಕಾಯುಕ್ತರ ಕಚೇರಿಗೆ ಸಲ್ಲಿಸಬಹುದು ಎಂದು ತಿಳಿಸಿದರು.
CLICK to Follow on Googlenews