ಮುಂದಿನ ನಾಲ್ಕರಿಂದ ಐದು ದಿನಗಳವೆರೆಗೆ ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಮುಸುಕಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ತಾಪಮಾನ 2 ರಿಂದ 6 ಡಿಗ್ರಿವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಂಜಾಬ್, ಹರಿಯಾಣ, ದೆಹಲಿ, ಚಂಡೀಗಢ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ದಟ್ಟವಾದ ಮಂಜು ಕಂಡುಬರುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಹಾಗೆಯೇ ಮುಂದಿನ ಮೂರು ದಿನಗಳಲ್ಲಿ ರಾಜಸ್ಥಾನ, ಹರಿಯಾಣ, ಪಂಜಾಬ್, ಚಂಡೀಗಢ ಮತ್ತು ದೆಹಲಿಯಲ್ಲಿ ಬೀಸುತ್ತಿರುವ ಶೀತ ಗಾಳಿಯು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ದಟ್ಟ ಮಂಜಿನ ಕಾರಣ, ವಿಮಾನ, ರಸ್ತೆ ಸಂಚಾರದಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ ಇದೆ.
_CLICK to Follow-Support us on Facebook page